ದಕ್ಷಿಣ ಕನ್ನಡ : ಮಂಗಳೂರು ನಗರದ ರಾಧಾಕೃಷ್ಣ ದೇವಸ್ಥಾನದ ಆವರಣದಲ್ಲಿರುವ ಬಾಳಂ ಭಟ್ ಹಾಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದಿನಾಂಕ 31- 08 -2023ರಿಂದ 09- 09- 2023 ವರೆಗೆ ಒಟ್ಟು ಹತ್ತು ದಿನಗಳ ಧಾರ್ಮಿಕ, ಸಾಂಸ್ಕೃತಿಕ, ಅಷ್ಟಾವಧಾನ,ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರಾದ ವೇದಮೂರ್ತಿ ಗಿರಿಧರ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದಿನಾಂಕ 31 ರಿಂದ ಹತ್ತು ದಿನಗಳು ನಿತ್ಯ ಸಾಯಂಕಾಲ ಗಂಟೆ 5 ರಿಂದ ಭಜನಾ ಸಂಕೀರ್ತನೆ ನಂತರ ಅಷ್ಟಾವಧಾನ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ದಿನಾಂಕ 06-09-2023 ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ವಿಶೇಷ ಕಾರ್ಯಕ್ರಮಗಳ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ಗಂಟೆ 8 ರಿಂದ ಹರಿಕಥಾ ಕಾಲಾಮೃತ, ಬಳಿಕ “ಮುದ್ದುಕೃಷ್ಣ” ಸ್ಪರ್ಧೆ ಹಾಗೂ “ರಾಧಾಕೃಷ್ಣ” ರೂಪಕ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಕಚೇರಿಯನ್ನು ಅಥವಾ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ದಿನಾಂಕ 09-09-2023 ಯಂದು ಪುಷ್ಪಾಲಂಕಾರ ಪೂಜೆ, ಭಜನಾ ಮಂಗಲೋತ್ಸವ ಕಾರ್ಯಕ್ರಮವಿದ್ದು, ಸಮಾಜ ಬಾಂಧವರು, ಭಕ್ತಾದಿಗಳು, ಸಾರ್ವಜನಿಕರು ನಿತ್ಯವೂ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರು ವಿನಂತಿಸಿರುತ್ತಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…