ಜನ ಮನದ ನಾಡಿ ಮಿಡಿತ

Advertisement

ಸಿಟಿ ಬಸ್ ಚಾಲಕನ ಧಾವಂತ; ಕಂಡೆಕ್ಟರ್ ಧಾರುಣ ಸಾವು …!

ಮಂಗಳೂರು; ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್‌ ಕಂಡೆಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿನ ನಡೆದಿದೆ.


15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದಕಂಡೆಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಇ ದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು, ಬಸ್ತಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!