ವಿಜಯನಗರದ ಹಂಪಿಯ ವಿಠ್ಠಲ ಸ್ಮಾರಕ ಬಳಿ ಅಪರೂಪದ ಹಾವು ಪತ್ತೆಯಾಗಿದೆ. ಬಿಳಿ ಬಣ್ಣದ ಮಣ್ಮುಕ್ ತಳಿಯ ಹಾವನ್ನು ನೋಡಿದ ಜನರು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.
ಕೂಡಲೇ ಅಲ್ಲಿನ ಸ್ಥಳೀಯರು ಉರಗ ರಕ್ಷಕ ಮಲ್ಲಿಕಾರ್ಜುನಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾವನ್ನು ರಕ್ಷಣೆ ಮಾಡಿದ್ದಾರೆ.
ಪಿಗ್ಮೇಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬಾರದೆ ಬಿಳಿ ಬಣಕ್ಕೆ ಹಾವು ತಿರುಗಿದೆ. ಹಂಪಿಯಲ್ಲಿ ಕಾಣಿಸಿಕೊಂಡ ಬಿಳಿ ಬಣ್ಣದ ಹಾವು ವಿಷಕಾರಿಯಲ್ಲ ಎಂಬ ಮಾಹಿತಿಯನ್ನು ಉರಗ ರಕ್ಷಕ ತಿಳಿಸಿದರು. ಬಳಿಕ ಅಲ್ಲಿದ್ದ ಸ್ಥಳೀಯರು ಮತ್ತು ಪ್ರವಾಸಿಗರು ನಿಟ್ಟುಸಿರು ಬಿಟ್ಟರು. ನಂತರ ರಕ್ಷಣೆ ಮಾಡಿದ ಹಾವನ್ನು ಸುರಕ್ಷಿತ ಪ್ರದೇಶದಲ್ಲಿ ಮಲ್ಲಿಕಾರ್ಜುನ ಬಿಟ್ಟು ಬಂದಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…