ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ನಾರಿಯರ ಜೋಶ್ ಹೆಚ್ಚಿಸಿದೆ. ಗೃಹಲಕ್ಷ್ಮಿ ಯೋಜನೆಯ ಸಂಭ್ರಮ ರಾಜ್ಯದ ವಿವಿಧೆಡೆ ಹಬ್ಬದ ವಾತಾವರಣವನ್ನೇ ತಂದಿದೆ. ಗೃಹಲಕ್ಷ್ಮಿ ಸ್ಕೀಮ್‌ಗೆ ಚಾಲನೆ ನೀಡುವ ಮುಂಚೆಯೇ ಗೃಹಲಕ್ಷ್ಮಿ ಯೋಜನೆಗೆ ಮಹಿಳಾ ಮಣಿಯರು ಕಲರ್‌ಫುಲ್ ಸ್ವಾಗತ ಕೋರಿದ್ದಾರೆ. ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಚಿತ್ತಾರ ಮೂಡಿಸಿದ್ದು ಗಮನ ಸೆಳೆದಿದೆ.
ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಯಜಮಾನಿಗೂ ಎರಡು ಸಾವಿರ ನೀಡುವ ಗುರಿಯನ್ನು ಹೊಂದಿದೆ. ಸರ್ಕಾರದ ಈ ಸೌಲಭ್ಯಕ್ಕಾಗಿ ನಾರಿಯರು ವಿಭಿನ್ನವಾಗಿ ಸ್ವಾಗತ ಕೋರಿದ್ದಾರೆ. ಮನೆಗೆ ಧನಲಕ್ಷ್ಮಿ ಬರುತ್ತಿದ್ದಾಳೆ ಎನ್ನುವ ರೀತಿಯಲ್ಲಿ ರಂಗೋಲಿ ಹಾಕುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ದೊಡ್ಡಗುಬ್ಬಿಯಲ್ಲಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಿನ್ನೆಲೆ ರಂಗೋಲಿ ಬಿಡಿಸಿ ಸಂಭ್ರಮ ಆಚರಿಸಿದ್ದಾರೆ. ಸುಂದರ ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಬರೆದಿದ್ದು ತಮ್ಮ ಸಂತೋಷವನ್ನು ಹೊರ ಹಾಕುತ್ತಿದ್ದಾರೆ. ರಂಗೋಲಿಯ ಬಳಿ ಫೋಟೋ ತೆಗೆಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು ಟೌನ್ ಹಾಲ್ ಬಳಿ ಗೃಹಲಕ್ಷ್ಮಿ ಕಾರ್ಯಕ್ರಮ ಕಳೆ ಕಟ್ಟಿತ್ತು. ಬಿಬಿಎಂಪಿ ಸಿಬ್ಬಂದಿ ಮಹಿಳಾ ಮಣಿಯರಿಗೆ ಗುಲಾಬಿ ಕೊಟ್ಟು ಬರಮಾಡಿಕೊಂಡಿದ್ದಾರೆ. ಟೌನ್ ಹಾಲ್ ಮುಂಭಾಗದಲ್ಲಿ ಸುಂದರವಾಗಿ ರಂಗೋಲಿ ಇಟ್ಟು ಸಂಭ್ರಮ ಆಚರಿಸಿದ್ದಾರೆ.
ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡುತ್ತಿದ್ದು ಇದಕ್ಕಾಗಿ ಬೃಹತ್ ಸಮಾವೇಶವನ್ನೇ ಆಯೋಜಿಸಿದೆ. ಈ ಸಮಾವೇಶಕ್ಕೂ ಮುನ್ನ ಮಹಿಳಾಮಣಿಯರು ಕುಣಿದು ಕುಪ್ಪಳಿಸಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…