ಪುತ್ತೂರು; ಆತ್ಮಹತ್ಯೆಗೆ ಪ್ರಚೋದನೆ ನೀಡಿದ 8 ಮಂದಿ ಆರೋಪಿಗಳ ವಿರುದ್ಧ ಗ್ರಾ,ಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸೀರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ವ್ಯಕ್ತಿ. ಆಗಸ್ಟ್ 22 ರಂದು ಈತ ತನ್ನ ಜೀವನ ಅಂತ್ಯಗೊಳಿಸುವುದಾಗಿ ವೀಡಿಯೋ ಮಾಡಿದ್ದಾನೆ.
ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 27 ರಂದು ಮೃತಪಟ್ಟಿದ್ದಾರೆ. ಈ ಹಿಂದೆ ಬೆಳ್ಳಾರೆಯಲ್ಲಿ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಸೀರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು.ಇದೀಗ ಮೃತ ಅಬ್ದುಲ್ ನಾಸೀರ್ ಅವರ ತಾಯಿ ಪುತ್ತೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಗಳಾದ ಅದ್ರಾಮ, ಮೊಯ್ದು, ತಾಜು, ಅಬ್ದುಲ್ಲಾ, ಸಮೀರ್, ನೌಫಾಲ್ ಮತ್ತು ಅತಾವುಲ್ಲಾ ಎಂಬುವವರ ವಿರುದ್ಧ ದೂರು ಆಧರಿಸಿ ಅಬ್ದುಲ್ ನಾಸೀರ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…