ಮೂಡಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಛೇರಿ ಹಾಗೂ ಸರಕಾರಿ ಪ್ರೌಢಶಾಲೆ ನೀರ್ಕೆರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟವು ಬುಧವಾರ ನಡೆಯಿತು.
‘ಕ್ರೀಡಾ ರತ್ನ’ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಗೋಲ್ ಹೊಡೆಯುವ ಮೂಲಕ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು.
ಮೂಡುಬಿದಿರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ. ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಸೋಲು- ಗೆಲುವು ಸದಾ ಇದ್ದೇ ಇರುತ್ತೆ ಆದರೆ ಭಾಗವಹಿಸುವುದು ಮುಖ್ಯ. ಹ್ಯಾಂಡ್ ಬಾಲ್ ಕ್ರೀಡೆಗೆ ತರಬೇತಿ ನೀಡಲು ಉತ್ತಮ ತರಬೇತುದಾರರಿದ್ದಾರೆ ಅವರಿಂದ ತರಬೇತಿಯನ್ನು ಪಡೆದು ರಾಜ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಹ ಕ್ರೀಡಾಪಟುಗಳಾಗ ಬೇಕೆಂದ ಅವರು ಈಗಾಗಲೇ ಚಂದ್ರಯಾನದ ಮೂಲಕ ನಮ್ಮ ದೇಶಕ್ಕೆ ಗರಿ ಬಂದಿದೆ. ಇದೀಗ ಪ್ರಯೋಗಾಲಯವನ್ನು ಮಾಡಿ ವಿಧ್ಯಾರ್ಥಿಗಳಲ್ಲಿ ವಿಜ್ಞಾನಿಗಳಾಗುವ ಕನಸನ್ನು ಬಿತ್ತಲಾಗುತ್ತಿದೆ ಮುಂದಿನ ದಿನಗಳಲ್ಲಿ ಸಾಧಕ ವಿಜ್ಞಾನಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದರು.
ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ ಮತ್ತು ದಾನಿಗಳ ಸಹಕಾರದಿಂದ ವ್ಯವಸ್ಥೆಗೊಳಿಸಲಾದ “ಕಲ್ಪನಾ ಚಾವ್ಲಾ” ವಿಜ್ಞಾನ ಪ್ರಯೋಗಾಲಯವನ್ನು ತೆಂಕಮಿಜಾರು ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಉದ್ಘಾಟಿಸಿದರು.
ಪ್ರಯೋಗಾಲಕ್ಕೆ ಸಹಕಾರ ನೀಡಿರುವ ದಾನಿಗಳಾದ ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆಯ ಅಧ್ಯಕ್ಷ ರೋಶನ್ ಡಿ’ಕೋಸ್ತ, ಚಂದ್ರಶೇಖರ ಎಡಪದವು ಮತ್ತು ಶ್ರೀನಿವಾಸ ಗೌಡ, ಜಾನ್ಸನ್ ಡಿ’ಸೋಜ ಅವರನ್ನು ಗೌರವಿಸಲಾಯಿತು.
ಉಪಾಧ್ಯಕ್ಷ ಕರುಣಾಕರ ಶೆಟ್ಟಿ,ಸದಸ್ಯರಾದ ವನಿತಾ, ಜಯಲಕ್ಷ್ಮೀ ಶೆಟ್ಟಿಗಾರ್, ಲಿಂಗಪ್ಪ ಗೌಡ, ಲಯನ್ಸ್ ನ ಎಲ್ ಸಿಐಎಫ್ ನ ಸಂಯೋಜಕ ವೆಂಕಟೇಶ್ ಹೆಬ್ಬಾರ್, ಲಯನ್ಸ್ ಕ್ಲಬ್ ನ ವಲಯಾಧ್ಯಕ್ಷೆ ಪ್ರತಿಭಾ ಹೆಬ್ಬಾರ್, ಊರಿನ ಹಿರಿಯರಾದ ಅಜಿತ್ ಕುಮಾರ್ ಜೈನ್, ಡಾ.ನಾರಾಯಣ ಪೈ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪುತ್ರನ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹೇಶ್, ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಕುಮಾರ್, ನೀರ್ಕೆರೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನೀರ್ಕೆರೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಡಾ.ಪ್ರತಿಮಾ ಹೆಚ್.ಪಿ.ಸ್ವಾಗತಿಸಿದರು.ದೈ.ಶಿ.ಶಿ.ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕಿಯರಾದ ಭಾಗ್ಯವತಿ ದಾನಿಗಳ ವಿವರ ನೀಡಿದರು. ಸವಿತಾ ವಿಠಲ್ ಕಾರ್ಯಕ್ರಮ ನಿರೂಪಿಸಿದರು. ಅನುಪಮಾ ವಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…