ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಸಂಭವಿಸಿದೆ.
ಘಟನೆಯ ಕುರಿತು ತುರ್ತು ನಿರ್ವಹಣಾ ಸೇವೆಗಳ ವಕ್ತಾರ ರಾಬರ್ಟ್ ಮುಲಾಡ್ಜಿ ಟ್ವೀಟ್ ಮಾಡಿದ್ದು ಅಗ್ನಿ ಅವಘಡದಲ್ಲಿ ಸುಮಾರು ಐವತ್ತೆರಡು ಮಂದಿ ಮೃತಪಟ್ಟಿದ್ದು ಜೊತೆಗೆ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ದಟ್ಟ ಹೊಗೆ ಪ್ರದೇಶ ಸುತ್ತ ಆವರಿಸಿಕೊಂಡಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…