ಹಿಂದಿನ ಸರಕಾರದ ವೇಳೆ ಉಳ್ಳಾಲದ ಬಟ್ಟಪಾಡಿಯಲ್ಲಿ ತೀವ್ರ ಕಡಲ್ಕೊರೆತದಿಂದ ತೀರ ಕೊಚ್ಚಿ ಹೋಗಿದ್ದು ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್ ಬ್ರೇಕರ್ ನಿರ್ಮಾಣ ಮಾಡುವುದಾಗಿ ಹೇಳಿ ಕೊನೆಯಲ್ಲಿ ಸಾಕಷ್ಟು ಅಧ್ಯಯನ ಬಳಿಕ ಅದನ್ನು ಬಹುತೇಕ ಕೈಬಿಡಲಾಗಿದೆ.
ಸದ್ಯ ಶಾಶ್ವತ ಪರಿಹಾರ ಅಸಾಧ್ಯ, ತುರ್ತಾಗಿ ಕಡಲಿಗೆ ಕಲ್ಲು ಹಾಕುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯ ಶಾಸಕರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಆ ಬಳಿಕ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಸೂಚಿಸಿದ್ದರು.
ಅದರಂತೆ ಬಂದರು ಇಲಾಖೆ ಯವರೂ ಕೆಲವು ಗುತ್ತಿಗೆದಾರರನ್ನು ವ್ಯವಸ್ಥೆ ಮಾಡಿದ್ದರು. ಒಟ್ಟು 1.6 ಕೋಟಿ ರೂ. ಅಂದಾಜು ಮೊತ್ತಕ್ಕೆ ಉಳ್ಳಾಲದ ಸೀಗ್ರೌಂಡ್ಸ್ ಹಾಗೂ ಬಟ್ಟಪಾಡಿಯಲ್ಲಿ ಕಡಲ ತೀರಕ್ಕೆ ಕಲ್ಲು ಹಾಕುವ ಕೆಲಸವನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಅದರಲ್ಲಿ ಸುಮಾರು ಶೇ. 50ರಷ್ಟು ಕೆಲಸವಾದರೂ ಇಲಾಖೆಯಿಂದ ಹಣ ಬರುವ ಸಾಧ್ಯತೆ ಕಾಣದಾದಾಗ ಗುತ್ತಿಗೆದಾರರು ಇದು “ಹಿಂದಿನ ಅನುಭವ’ ಎಂದು ಅಲ್ಲಿಗೇ ಕೆಲಸ ಸ್ಥಗಿತಗೊಳಿಸಿ ಹೋಗಿದ್ದಾರೆ.
ಆ ಮೂಲಕ ಕಳೆದ 5 ವರ್ಷಗಳಿಂದ ಆಗುತ್ತಿದ್ದ ಸಂಪ್ರದಾಯ ಈ ವರ್ಷವೂ ಮುಂದುವರಿದಂತಾಗಿದೆ. ಗುತ್ತಿಗೆದಾರರಿಗೆ ಬರಬೇಕಾದ ಮೊತ್ತ 25.14 ಕೋಟಿ ರೂ.ಗೆ ಏರಿಕೆಯಾಗಿದೆ. 2018-19ರಲ್ಲಿ ಸೋಮೇಶ್ವರ ಭಾಗದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿ ತಕ್ಷಣಕ್ಕೆ ಬೇಕಾದ ಸುಮಾರು 2.3 ಕಿ.ಮೀ ಭಾಗಕ್ಕೆ ಕಲ್ಲು ಹಾಕಲಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಅನುಮೋದನೆ ಸಿಗದೆ ಈ ಮೊತ್ತ ಹಾಗೆಯೇ ಬಾಕಿಯಾಗಿತ್ತು. ಅದಕ್ಕೆ ಅನಂತರದ ವರ್ಷಗಳಲ್ಲಿ ಮೊತ್ತ ಸೇರ್ಪಡೆಯಾಗುತ್ತಲೇ ಹೋಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…