ನೆಹರು ಯುವ ಕೇಂದ್ರ ಮಂಗಳೂರು, ರಜತಾ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಯುವಕ ಸಂಘ (ರಿ) ತೋಕೂರು ,ರೋಟರಿ ಸಮುದಾಯದಳ ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ತೋಕೂರಿನ ಲೈಟ್ ಹೌಸ್ ನಿಂದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರಸ್ತೆ ಬಳಿ ,ರಸ್ತೆ ಸುರಕ್ಷಾ ಪೀನ ಗಾಜು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ. ರಾವ್, ಯುವಕ ಸಂಘದ ಅಧ್ಯಕ್ಷರಾದ ಶೇಖರ ಶೆಟ್ಟಿಗಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಹೇಮನಾಥ ಅಮೀನ್ ಹಾಗೂ ಜಂಟಿ ಸಂಸ್ಥೆಗಳ ಸದಸ್ಯರು ಭಾಗವಹಿಸಿದರು.




