ಉಡುಪಿ ಲೋಕಾಯುಕ್ತ ಪೊಲೀಸರು ಅಜೆಕಾರ್ ನಾಡಕಚೇರಿ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಒಂದನೇ ವಿಭಾಗದ ಗುಮಾಸ್ತನನ್ನು ಬಂಧಿಸಿದ್ದಾರೆ.
ಕಚೇರಿಯ ಒಂದನೇ ವಿಭಾಗದ ಗುಮಾಸ್ತ ನಿಜಾಮುದ್ದೀನ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ. ಕುಟುಂಬದ ನಕ್ಷೆ ತಯಾರಿಸಲು ಹಿರ್ಗಾನಾ ಮೂಲದ ವ್ಯಕ್ತಿಯಿಂದ 5000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದೂರುದಾರರು ಮೊದಲ ಕಂತಾಗಿ 4000 ರೂಪಾಯಿ ನೀಡಿ ಲೋಕಾಯುಕ್ತರಿಗೆ ವಿಷಯ ತಿಳಿಸಿದ್ದಾರೆ. ಅದರಂತೆ ನಿಜಾಮುದ್ದೀನ್ ಎರಡನೇ ಕಂತಾಗಿ 1000 ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ನಿಜಾಮುದ್ದೀನ್ ಕಳೆದ 15 ವರ್ಷಗಳಿಂದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಪಿಐ ರಫೀಕ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ಮಲ್ಲಿಕಾ, ಸತೀಶ್, ಅಬ್ದುಲ್, ರವೀಂದ್ರ, ಸೂರಜ್ ಭಾಗವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…