ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಪಡುಕೋಣೆಯಲ್ಲಿ ನಡೆದಿದೆ.

ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ವಿದ್ಯಾರ್ಥಿನಿ, ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಈಕೆ ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದಳು. ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು, ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಈ ಮಧ್ಯೆ ಸಿಂಧು ಮನೆಯವರ ಗಮನಕ್ಕೆ ಬಾರದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



