ಜನ ಮನದ ನಾಡಿ ಮಿಡಿತ

Advertisement

ಅಯ್ಯೋ..! ಆಸ್ತಿಗಾಗಿ 5 ತಿಂಗಳ ಹಸುಕೂಸಿನ ಕೊಲೆ

ಐದು ತಿಂಗಳ ಹಸುಗೂಸಿಗೆ ಮಲತಾಯಿ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿರೋ ಆರೋಪ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.


ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ ಐದು ತಿಂಗಳ ಹಸುಕೂಸು.


ಮನೆಯಲ್ಲಿ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಾ ಇರ್ತಾರೆ. ಆಗ ಒತ್ತಾಯ ಪೂರ್ವಕವಾಗಿ ಆರೋಪಿ ದೇವಮ್ಮ ಹಾಲುಣಿಸುತ್ತೇನೆ ಅಂತಾ ಕರೆದುಕೊಂಡು ಹೋಗಿದ್ದಾರೆ. ಮನೆಯ ರೂಮಿಗೆ ಹೋಗಿ ಡೋರ್ ಮುಚ್ಚಿಕೊಂಡಿದ್ದಾರೆ. ಆಗ ಹಾಲಿನ ಬಾಟಲ್‌ನಲ್ಲಿ ವಿಷ ಬೆರೆಸಿ ಕೂಸಿಗೆ ಹಾಲು ಕೂಡಿಸಿದ್ದಾರೆ ಎನ್ನಲಾಗಿದೆ.ವಿಷ ಬೆರೆಸಿದ ಹಾಲು ಕುಡಿದ ಮೂರು ಗಂಟೆ ನಂತರ ಹಸುಗೂಸಿನ ಬಾಯಲ್ಲಿ ನೊರೆ ಬಂದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂಗೀತಾ ಚೆಟ್ಟಿಗೇರಿ ಸಾವನ್ನಪ್ಪಿದ್ದಾಳೆ. ಕಳೆದ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ದೇವಮ್ಮಳನ್ನು ವಡಗೇರಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ 11 ವರ್ಷಗಳ ಹಿಂದೆ ಶ್ರೀದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಶ್ರೀದೇವಿಗೆ ಮಕ್ಕಳಾಗದ ಹಿನ್ನೆಲೆ ಕಳೆದ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದಾನೆ. ದೇವಮ್ಮಳನ್ನ ಮದುವೆಯಾದ ನಂತರ ಶ್ರೀದೇವಿ ಗಂಡನ ಮನೆ ಬಿಟ್ಟು ತನ್ನ ತವರು ಮನೆಗೆ ಹೋಗಿದ್ದಾಳೆ. ಹಿರಿಯರ ರಾಜಿ ಸಂಧಾನದ ನಂತರ ಕಳೆದ ಮೂರು ವರ್ಷಗಳ ಹಿಂದೆ ಗಂಡನ ಮನೆಗೆ ವಾಪಸ್ ಆಗಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದೆ. ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿ ಐದು ತಿಂಗಳ ಮಗಳು ಸಂಗೀತಾಗೆ ಪಾಲು ಹೋಗುತ್ತೆ ಅಂತಾ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!