ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸರಳವಾದ ಅಷ್ಟೇ ರಂಜನೀಯ ಅಂಶಗಳಿಂದ ಕೂಡಿದ ಈ ನಾಯಿಮರಿ ನಾಟಕವು ಸಮರ್ಥ ನಿರ್ದೇಶನ, ನವಿರು ಹಾಸ್ಯ, ಪರಿಣಾಮಕಾರಿ ಅಭಿನಯ, ಸುಶ್ರಾವ್ಯ ಸಂಗೀತ, ಉತ್ತಮ ರಂಗ ಸಜ್ಜಿಕೆ ಮತ್ತು ಬೆಳಕು ಸಂಯೋಜನೆಯೊಂದಿಗೆ ಪ್ರೇಕ್ಷಕರನ್ನು ಪ್ರತಿಕ್ಷಣವೂ ಹಿಡಿದಿಟ್ಟುಕೊಳ್ಳುವ ಪ್ರಯೋಗವಾಗಿದೆ.
ಪ್ರತಿ ದಿನ ನಾಟಕವು ಸಂಜೆ 6.45 ಕ್ಕೇ ಆರಂಭವಾಗಲಿದ್ದು, ನಾಟಕ ನೋಡಲು
ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…