ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.
ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ ಮಾಡಿ ಸೂಳ್ಳೂರು ಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ. ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್‌ಸೈಟ್ isro.gov.in, Facebook ಖಾತೆ https://facebook.com/ISRO ಮತ್ತು youtube.com/watch?v=_IcgGYZTXQw ಯೂಟ್ಯೂಬ್ ಚಾನೆಲ್‌ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…