ಅಕ್ರಮ ಸಂಬಂಧದ ಅನುಮಾನಕ್ಕೆ ಗಂಡ ತನ್ನ ಹೆಂಡತಿಯನ್ನು ಊರಿನ ಜನರ ಮುಂದೆಯೇ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ.
ಇದಕ್ಕೆ ಅತ್ತೆ, ಮಾವ ಕೂಡ ಕುಮ್ಮಕ್ಕು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ಈ ಅನಾಗರಿಕ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪೋಷಕರ ಮಾತು ಕೇಳಿಕೊಂಡು ಪತಿಯು ತನ್ನ 21 ವರ್ಷದ ಪತ್ನಿಯನ್ನೇ ವಿವಸ್ತ್ರಗೊಳಿಸಿದ್ದಾನೆ. ಬಳಿಕ ಆಕೆಗೆ ಮನ ಬಂದಂತೆ ಥಳಿಸಿ ನಂತರ ಆಕೆಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಇದನ್ನು ಅಲ್ಲಿದ್ದವರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.
ಸದ್ಯ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರಿಂದ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರು ಶೀಘ್ರವಾಗಿ ಕ್ರಮ ತೆಗೆದುಕೊಂಡು ಆರೋಪಿಗಳನ್ನ ಕೋರ್ಟ್ನಲ್ಲಿ ವಿಚಾರಣೆ ನಡೆಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಎಡಿಜಿಪಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…