ಜನ ಮನದ ನಾಡಿ ಮಿಡಿತ

Advertisement

5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ; 63 ಮಂದಿ ಸಾವು

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು ಎನ್ನಲಾಗಿದೆ. ಆದರೆ ಬೆಂಕಿ ಅನಾಹುತಕ್ಕೆ ಕಾರಣ ಹಾಗೂ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!