ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಚಿಕ್ಕಮಗಳೂರು ನಿವಾಸಿ ಸಂತೋಷ್ (23)
ಎಂಬಾತನನ್ನು ಬಂಧಿಸಲಾಗಿದೆ. ಈತ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದು, ವೇಣೂರು ಪೊಲೀಸರು ತಡೆದು ನಿಲ್ಲಿಸಿದಾಗ ಆತನು ನಶೆಯಲ್ಲಿದ್ದಂತೆ ಕಂಡು ಬಂದಿದ್ದ. ಆತನನ್ನು ವಿಚಾರಿಸಿದಾಗ ಗಾಂಜಾ
ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ವೈದ್ಯಾಧಿಕಾರಿಗಳಿಂದ ತಪಾಸಣೆಗೊಳಪಡಿಸಿದಾಗ
ನಿಷೇಧಿತ ವಸ್ತು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.




