ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ಕೃಷ್ಣ
ಲೀಲೋತ್ಸವ’ ಕಾರ್ಯಕ್ರಮ ಸೆ. 7 ರಂದು ಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾಯ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ರವರು ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶಿಬರ ಜಯರಾಮ ಕೆದಿಲಾಯ ವಹಿಸಲಿದ್ದಾರೆ.





