ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್‌ಎಸ್ ಐಸಿ, ಐಆರ್‌ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…