ಮೂಡಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜಮಂದಿರದಲ್ಲಿ ಭಾನುವಾರ ೩೨ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು.
ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೀವ್ರ ಉತ್ಸಾಹ ವ್ಯಕ್ತವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ತಿಳಿಸಿದರು.
ಮುಖ್ಯಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಪ್ರಭಾತ್ ಚಂದ್ರ ಜೈನ್ ಮಾತನಾಡಿ, ಮನೋಸ್ಥೈರ್ಯ, ಚತುರತೆ ಇದ್ದರೆ ಯಾವುದೇ ಸಮಸ್ಯೆಯನ್ನು ಲೀಲಾಜಾಲವಾಗಿ ಪರಿಹರಿಸಬಹುದೆಂಬುದನ್ನು ಶ್ರೀ ಕೃಷ್ಣ ತನ್ನ ವ್ಯಕ್ತಿತ್ವದ ಮೂಲಕ ಸಾರಿರುವುದು ಮಾನವರಾದ ನಮಗೆಲ್ಲ ಆದರ್ಶ ಎಂದರು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಘಟನೆಯ ಪ್ರ. ಕಾರ್ಯದರ್ಶಿ ಸುದರ್ಶನ ಎಂ. ಎಲ್ಲ ಕಾಲಕ್ಕೂ ಸಲ್ಲುವ ಶ್ರೀ ಕೃಷ್ಣನ ವ್ಯಕ್ತಿತ್ವ ವಿಶೇಷ ತಿಳಿಸಿ ಮನುಕುಲ ಯಾವ ರೀತಿ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟು ಜಗ್ದ್ ವಂದ್ಯನೆನೆಸಿಕೊಂಡಿದ್ದಾನೆ ಎಂದರು.
ತೀರ್ಪುಗಾರರಾದ ಶಿವಕುಮಾರ ಉಮ್ಮತ್ತೂರು, ರಮ್ಯಾ ಸುರೇಂದ್ರ ಕಾರ್ಕಳ ಮತ್ತು ರೇಷ್ಮಾ ಹರ್ಷ ಇವರನ್ನು ಅತಿಥಿಗಳು ಗೌರವಿಸಿದರು.
ಸಂಚಾಲಕ ಸಂತೋಷ್ ಕುಮಾರ್ ಸ್ವಾಗತಿಸಿ, ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಜಗದೀಶ ಶೆಟ್ಟಿ, ಸಂಜೀವ ನಾಯ್ಕ್ , ಜತೆ ಕಾರ್ಯದರ್ಶಿಗಳಾದ ಸತೀಶ `ಭಂಡಾರಿ, ಆನಂದ ಸುವರ್ಣ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…