ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಮೈದಾನದಲ್ಲಿ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ ವಿಶ್ವ ಬಂಟರ ಕ್ರೀಡಾಕೂಟ ವಿಶ್ವ ಬಂಟರ ಸಂಸ್ಕೃತಿಕ ವೈಭವ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಯವರಾದ ಕೆ. ವಿದ್ಯಾ ಕುಮಾರಿ ಅವರನ್ನು ಹೂಗುಚ್ಚ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಮಾನ್ಯ ಜಿಲ್ಲಾಧಿಕಾರಿ ಯವರು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಮತ್ತು ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿ, ತೋನ್ಸೆ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಮನೋಹರ್ ಶೆಟ್ಟಿ ತೋನ್ಸೆ, ಡಾ . ರೋಶನ್ ಶೆಟ್ಟಿ ಉಡುಪಿ ಜಿಲ್ಲಾ ಕ್ರೀಡಾ ಅಧಿಕಾರಿ ಉಪಸ್ಥಿತರಿದ್ದರು.



