ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್ ಅವರ ಸ್ಥಾನಕ್ಕೆ 2019 ರ ಬ್ಯಾಚ್ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಗೋಯಲ್ ಅವರನ್ನು ನೇಮಿಸಲಾಗಿದೆ.

2018ರ ಬ್ಯಾಚ್ನ ಐಪಿಎಸ್ ಅಧಿಕಾರಿ ಅಂಶುಕುಮಾರ್ ಅವರು ಕಳೆದ ಒಂದು ವರ್ಷದಿಂದ ನಗರ ಡಿಸಿಪಿಯಾಗಿ ಮಾದಕ ದ್ರವ್ಯ, ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ, ಸಿಸಿ ಕ್ಯಾಮೆರಾ ಅಳವಡಿಕೆ, ತಂತ್ರಜ್ಞಾನ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.



