ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯರಾದ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ತೋಕೂರು ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ಆಚರಿಸಲಾಯಿತು.

ಭಾರತ ಕಂಡ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿಯ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಸಂದರ್ಭದಲ್ಲಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇಲ್ಲಿನ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರು ಮೋಹನ್ ದಾಸ್ ಇವರು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, “ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಜೀವನದ ಅಭಿವೃದ್ಧಿಯ ಮೂಲವಾಗಿರುವ ಕ್ರೀಡೆಯು ನಮ್ಮನ್ನು ಆರೋಗ್ಯಕರವಾಗಿರಿಸುತ್ತದೆ. ಕ್ರೀಡೆಯಿಂದ ದೇಹವು ಉತ್ತಮ ವ್ಯಾಯಾಮವನ್ನು ಪಡೆಯುತ್ತದೆ. ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಛಲಬಿಡದೆ ಸಾಧನೆ ಮಾಡಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವ ಶಕ್ತಿ ಅವರಿಗಿರುತ್ತದೆ” ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಸ್ಪೋರ್ಟ್ಸ್ ಕ್ಲಬ್ ನ ಗೌರವ ಅದ್ಯಕ್ಷರಾದ ಪ್ರಶಾಂತ್ ಕುಮಾರ್ ಬೇಕಲ್,ಅಧ್ಯಕ್ಷರಾದ ಜಗದೀಶ್ ಕುಲಾಲ್, ಗೌರವ ಮಾರ್ಗದರ್ಶಕರಾದ ಲಕ್ಷ್ಮಣ್ ಸಾಲ್ಯಾನ್, ಉಪಾಧ್ಯಕ್ಷ ಸುನಿಲ್ ದೇವಾಡಿಗ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ,ಕ್ರೀಡಾ ಕಾರ್ಯದರ್ಶಿ ಮಹಮ್ಮದ್ ಯೂನುಸ್, ಕ್ರಿಕೆಟ್ ತಂಡದ ನಾಯಕ ಗೌತಮ್ ಬೆಲ್ಚೆಡ್, ಮತ್ತು ಸಂಸ್ಥೆಯ ಪದಾಧಿಕಾರಿಗಳು , ಸದಸ್ಯರು ಹಾಗೂ ಮತ್ತಿತರರು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸ್ಪೋರ್ಟ್ಸ್ ಕ್ಲಬ್ ನ ಅದ್ಯಕ್ಷರಾದ ಜಗದೀಶ್ ಕುಲಾಲ್ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ ವಂದಿಸಿದರು. ನಿಕಟ ಪೂರ್ವ ಕಾರ್ಯಧ್ಯಕ್ಷರಾದ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



