ಮಂಗಳೂರಿನ ಹೊಸ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.
ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್. ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವ ಹುದ್ದೆ ಎಂದು ತೋರಿಸದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.
ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…