ಜನ ಮನದ ನಾಡಿ ಮಿಡಿತ

Advertisement

ಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ಇಲ್ಲಿನ ಸ್ವತ್ತುಗಳಿಗೆ ಹಾನಿ ಮಾಡಿ

ವಿಟ್ಲ: ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.

ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!