ವಿಟ್ಲ: ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.
ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…