ಜನ ಮನದ ನಾಡಿ ಮಿಡಿತ

Advertisement

ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ; ಜಾಮೀನು ರಹಿತ ವಾರೆಂಟ್ ಜಾರಿ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಪ್ರಕರಣದಲ್ಲಿ ಕೋರ್ಟ್‌ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. 2017ರಲ್ಲಿ ಶಶಿಕಲಾ ನಟರಾಜ್ ಅವರು ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. 2017ರಿಂದ 2021 ಜನವರಿವರೆಗೂ ಶಶಿಕಲಾ ನಟರಾಜ್ ಸೆರೆವಾಸ ಅನುಭವಿಸಿದ್ದರು. ಈ ವೇಳೆ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಐಷಾರಾಮಿ ಸೇವೆ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.

ಸೆಂಟ್ರಲ್ ಜೈಲಿನಲ್ಲಿ ಶಶಿಕಲಾ ನಟರಾಜ್‌ ಅವರು ಐಷಾರಾಮಿ ಸೇವೆ ಪಡೆದ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಈ ಬಗ್ಗೆ ತನಿಖೆ ಮಾಡಲಾಗಿದ್ದು ಲೋಕಾಯುಕ್ತ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇತ್ತೀಚೆಗೆ ಹೈಕೋರ್ಟ್ ಜೈಲಿನ ಸಿಬ್ಬಂದಿ ವಿರುದ್ಧದ ಆರೋಪವನ್ನು ರದ್ದು ಮಾಡಿತ್ತು. ಅದರಂತೆ ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಶಶಿಕಲಾ ನಟರಾಜ್ ಅವರು ಕೋರಿದ್ದಾರೆ. ನಿನ್ನೆ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಶಿಕಲಾ ನಟರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಶಶಿಕಲಾ ಅವರ ಜೊತೆಗೆ ಅವರಿಗೆ ಶ್ಯೂರಿಟಿ ನೀಡಿದ್ದವರಿಗೂ ನೊಟೀಸ್ ಜಾರಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!