ಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ಇಲ್ಲಿನ ಸ್ವತ್ತುಗಳಿಗೆ ಹಾನಿ ಮಾಡಿ, ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.
ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…