ಆಹಾರ ವಿತರಣೆ ಜತೆಗೆ ಮಾದಕ ದ್ರವ್ಯ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಮೂಲದ ಅಬ್ದುಲ್ ಸಲಾಂ (25) ಎಂದು ಗುರುತಿಸಲಾಗಿದೆ.

ಗೋವಿಂದರಾಜನಗರ ಪೊಲೀಸ್ ಠಾಣೆ ಸಿಬ್ಬಂದಿ ಮಾರುಕಟ್ಟೆಯಲ್ಲಿ 1.5 ಲಕ್ಷ ಮೌಲ್ಯದ 55 ಗ್ರಾಂ ಎಂಡಿಎಂಎ ಮಾದಕ ದ್ರವ್ಯ ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಯು ಇತ್ತೀಚೆಗೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಸಿಆರ್ ಲೇಔಟ್‌ನಲ್ಲಿ ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವುದು ಪತ್ತೆಯಾಗಿತ್ತು.



