ಕರ್ನಾಟಕ ರಾಜ್ಯಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಜೀವ ಸದಸ್ಯರಾಗಿ , ಅಧ್ಯಕ್ಷರಾಗಿ, ವಿವಿಧ ಹುದ್ದೆಗಳನ್ನು ಅಲಂಕರಿಸಿ , ಸಲಹಾ ಸಮಿತಿಯ ಸದಸ್ಯರಾಗಿ, ದೇವಾಡಿಗ ಸಮಾಜ ಸೇವಾ ಸಂಘ (ರಿ), ಪಾವಂಜೆ ಇದರ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ಪ್ರಸ್ತುತ ಸಲಹೆಗಾರರಾಗಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾಗಿ, ಪಾವಂಜೆ ಸರ್ವಶಕ್ತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ, ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡ, ನಾಟಕ, ರೂಪಕ, ನೃತ್ಯ, ಯಕ್ಷಗಾನ ಕಲಾರಾಧನೆಯಲ್ಲಿ ತನ್ನದೇ ಆದ ಕಲಾಚಾತುರ್ಯ ಪಡೆದು ಇತ್ತೀಚೆಗೆ ದೈವಾಧೀನರಾದ ಶ್ರೀ ಸೋಮನಾಥ ದೇವಾಡಿಗ, “ಶಿವಸ್ವಾಮಿ ನಿಲಯ”, ಪಾವಂಜೆ ಇವರ ಆತ್ಮಕ್ಕೆ ಚಿರಶಾಂತಿ ಕೋರಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಆದಿತ್ಯವಾರ ಸಂಜೆ 5.30 ಗಂಟೆಗೆ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.
ಈ ಸಂತಾಪ ಸೂಚಿ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಭಾಸ್ಕರ್ ಸಾಲ್ಯಾನ್, ಮೀರಾ ಬಾಯಿ ಕೆ., ಸತೀಶ್ ಎನ್ ಇಂದಿರಾನಗರ, ಮೋಹನ್ ಸುವರ್ಣ, ರಾಮದಾಸ್ ಪಾವಂಜೆ ಇವರು ಅಗಲಿದ ಸೋಮನಾಥ ದೇವಾಡಿಗ ಇವರ ಬಗ್ಗೆ ಗುಣಗಾನ ಮಾಡಿದರು.
ಶ್ರೀ ಸೋಮನಾಥ ದೇವಾಡಿಗ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ ಜಿ, ಜಂಟಿ ಸಂಸ್ಥೆಯ ಪದಾಧಿಕಾರಿಗಳು, ಟ್ರಸ್ಟಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀರಾಮದಾಸ್ ಪಾವಂಜೆ ಕಾರ್ಯಕ್ರಮವನ್ನು ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…