ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಡುಬೆಳ್ಳೆ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಜಿನ್ ರಾಜ್ ಸಾಲ್ಯಾನ್ ಮಾತನಾಡಿ ವಿದ್ಯಾರ್ಥಿಗಳ ಜೀವನದ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ, ಮಕ್ಕಳಿಗೆ ಸಮಾಜದಲ್ಲಿ ಉನ್ನತ ಮಟ್ಟದ ಸ್ಥಾನಮಾನ ಗಳಿಸಲು ಶಿಕ್ಷಕರ ಶ್ರಮ ಅನನ್ಯವಾಗಿದ್ದು ದೇಶ ಸೇವೆ ಮಾಡಲು ಶಿಕ್ಷಣ ನೀಡುವ ಎನ್‌ಸಿಸಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯಂದು ಗೌರವ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ, ಎಚ್.ಕೆ.ಉಷಾ ರಾಣಿ, ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು,ಜಿತೇಂದ್ರ ವಿ ರಾವ್,ಪ್ರಾಣೇಶ್ ಭಟ್ ದೇಂದಡ್ಕ, ಜನವಿಕಾಸ ಸಮಿತಿ ಅಧ್ಯಕ್ಷೆ ಶೋಭಾ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ತಾಲ್ಲೂಕಿನ ಎನ್‌ಸಿಸಿ ಅಧಿಕಾರಿಗಳಾದ ಕ್ಯಾ. ರಾಜೇಶ್ ಶೆಟ್ಟಿಗಾರ್ ವಿಜಯಾ ಕಾಲೇಜು ಮುಲ್ಕಿ, ಲೆ.ಕ. ಪುರುಷೋತ್ತಮ ಕೆವಿ ಪೊಂಪೈ ಕಾಲೇಜ್ ಐಕಳ, ಚೀಫ್ ಆಫೀಸರ್ ಗಂಗಾಧರ ಪೂಜಾರಿ, ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಮುಲ್ಕಿ, ಸೆಕೆಂಡ್ ಆಫೀಸರ್ ಪ್ರವೀಣ್ ಪೂಜಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಜೆ, ಕೇರ್ ಟೇಕರ್ ಹರೀಶ್ ಬಿ ಶ್ರೀ ದುರ್ಗಾಪರಮೇಶ್ವರೀ ಕಾಲೇಜು ಪ್ರೌಡ ಶಾಲೆ ವಿಭಾಗ ಕಟೀಲು ರವರನ್ನು ಗೌರವಿಸಲಾಯಿತು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಪ್ರಾಣೇಶ್ ಭಟ್ ದೇಂದಡ್ಕ, ಧನ್ಯವಾದ ಅರ್ಪಿಸಿದರು, ಜಿತೇಂದ್ರ ವಿ ರಾವ್ ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…