ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು.

ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ , ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪುತ್ರಿ, ಸಹೋದರ, ಸಹೋದರಿಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



