ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ ಇನ್ಮುಂದೆ ಭಾರತ.. ಭಾರತ ಬದಲಾದ್ರೆ ಪಾಕಿಸ್ತಾನಕ್ಕೆ ಲಾಭ; ‘ಇಂಡಿಯಾ’ ಮೇಲೆ ಹಕ್ಕು ಚಲಾಯಿಸಲು ಪ್ಲಾನ್‌

ಇಂಡಿಯಾ ಇನ್ಮುಂದೆ ಭಾರತ.. ದೇಶದ ಮರುನಾಮಕರಣದ ವಿಚಾರ ಕೇವಲ ಭಾರತದಲ್ಲಷ್ಟೇ ಅಲ್ಲ ಪಾಕಿಸ್ತಾನದಲ್ಲೂ ಬಹಳಷ್ಟು ಚರ್ಚೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾ ಅನ್ನೋ ದೇಶದ ಹೆಸರನ್ನು ಭಾರತ್ ಎಂದು ಬದಲಾಯಿಸಲಿದೆ ಎನ್ನಲಾಗಿದೆ.

ಈ ಮರುನಾಮಕರಣದ ವಿವಾದಕ್ಕೆ ದೇಶಾದ್ಯಂತ ಪರ, ವಿರೋಧದ ಚರ್ಚೆಯಾಗುತ್ತಿದೆ. ಇನ್ನೂ ಭಾರತದ ಸಂಸತ್‌ನಲ್ಲಿ ಮರುನಾಮಕರಣದ ವಿಚಾರವೇ ಪ್ರಸ್ತಾಪವಾಗಿಲ್ಲ. ಸಂವಿಧಾನದಲ್ಲಿ ತಿದ್ದುಪಡಿಯೂ ಆಗಿಲ್ಲ. ಅಷ್ಟರಲ್ಲಾಗಲೇ ಇಂಡಿಯಾ ಮೇಲೆ ನೆರೆರಾಷ್ಟ್ರ ಪಾಕಿಸ್ತಾನದ ಕಣ್ಣು ಬಿದ್ದಿದೆ.

ಒಂದು ವೇಳೆ ದೇಶದ ಹೆಸರನ್ನು ಭಾರತ ಬದಲಾವಣೆ ಮಾಡಿದರೆ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಚಿಂತನೆ ನಡೆಸಿದೆ. ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಇಂಡಿಯಾ ಬದಲು ಭಾರತ ಎಂದು ಮಾನ್ಯತೆ ಸಿಕ್ಕರೆ ಆಗ ಪಾಕಿಸ್ತಾನ ತನ್ನ ಹಕ್ಕು ಮಂಡಿಸಲು ಮುಂದಾಗಿದೆ. ಪಾಕಿಸ್ತಾನ ಕೂಡ ಇಂಡಸ್ ನದಿಯ ಪಾತ್ರದಲ್ಲಿದೆ. ಹೀಗಾಗಿ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಮಂಡಿಸುವ ಸಾಧ್ಯತೆ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಸಿಗೋ ಮುನ್ನವೇ ಪಾಕಿಸ್ತಾನದ ಪಿತಾಮಹ ಮಹಮ್ಮದ್ ಅಲಿ ಜಿನ್ನಾ ಅವರು ಇಂಡಿಯಾ ಹೆಸರಿಗೆ ವಿರೋಧ ವ್ಯಕ್ತಪಡಿಸಿದ್ದರು. ನಮ್ಮದು ಪಾಕಿಸ್ತಾನ, ಇಂಡಿಯಾ ಹಿಂದೂಸ್ತಾನ. ಭಾರತವನ್ನು ಹಿಂದೂಸ್ತಾನ ಎಂದು ಕರೆಯಬೇಕೇ ವಿನಃ ಇಂಡಿಯಾ ಅಲ್ಲ ಎಂದು ಮಹಮ್ಮದ್ ಅಲಿ ಜಿನ್ನಾ ಹೇಳಿದ್ದರು. ಆದರೆ ಸಂವಿಧಾನದ ರಚನಾ ಸಭೆಯಲ್ಲಿ ಇಂಡಿಯಾ ಹಾಗೂ ಭಾರತ ಎಂದು ಹೆಸರಿಡಲು ಹೆಚ್ಚು ವೋಟ್ ಹಾಕಲಾಯಿತು. ಹೀಗಾಗಿ ಸಂವಿಧಾನದ ಆರ್ಟಿಕಲ್ 1 ರಲ್ಲಿ ಇಂಡಿಯಾ ಅಂದರೆ ಭಾರತವು ರಾಜ್ಯಗಳ ಒಕ್ಕೂಟ ಎಂದು ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!