ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದ್ದು, ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.
ಇನ್ನೂ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ದೃಶ್ಯ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



