ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಸರ್ಕಾರ ಈಗಾಗಲೇ ಖಜಾನೆಗೆ ಹಣ ಬಿಡುಗಡೆ ಮಾಡಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ. ಅಲ್ಲದೇ, ಎಲ್ಲರಿಗೂ ಹಣ ತಲುಪಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ
ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಸದ್ಯ ಗೃಹಲಕ್ಷ್ಮಿ ಯೋಜನೆಯಡಿ 7-8 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಹಣ ಜಮೆ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಅಂಥವರ ಪಟ್ಟಿ ಮಾಡಲಾಗಿದ್ದು, ಬ್ಯಾಂಕ್ ಖಾತೆ ಸಕ್ರಿಯಗೊಳಿಸುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಗೃಹಲಕ್ಮೀ ಯೋಜನೆಯಡಿ ಒಂದು ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಈವರೆಗೆ ಒಟ್ಟು 59 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಜಮೆ ಮಾಡಲಾಗಿದೆ ಎಂದರು.



