ಪುತ್ತೂರು; ದರೋಡೆಕೋರರ ಗುಂಪುವೊಂದು ಬಡಗನ್ನೂರು ಗ್ರಾ. ಪಂ. ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಇಬ್ಬರೇ ವಾಸವಿದ್ರು. 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ ಜೀವಬೆದರಿಕೆಯೊಡ್ಡಿ, ತಾಯಿ ಮಗನನ್ನು ಕಂಬಕ್ಕೆ ಕಟ್ಟಿ ಹಾಕಿ ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ.
ಗುರುತು ಸಿಗದಂತೆ ಮುಖವಾಡ ಧರಿಸಿ ಬಂದಿದ್ದ ದರೋಡೆಕೋರರ ಗುಂಪು, ಗುರುಪ್ರಸಾದ್ ರೈ ಯಾರನ್ನೂ ಸಂಪರ್ಕಿಸದಂತೆ ಅವರ ಮೊಬೈಲನ್ನು ನೀರಿಗೆ ಹಾಕಿದ್ದರು ಎಂದು ತಿಳಿದು ಬಂದಿದೆ.
ಅದು ಹೇಗೋ ಗುರುಪ್ರಸಾದ್ ರೈ ಸಂಪ್ಯ ಪೊಲೀಸರಿಗೆ ಮಾಹಿತಿ ನೀಡಿ̧ದ್ದು ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…