ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವು..!

ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.

ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್‌ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.

ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!