ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.
ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.
ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…