ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.
ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.
ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…