ಯಮುನ ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದ, ಘಟನೆ ಚಿಕ್ಕಮಗಳೂರು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ.

ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ (15) ಮೃತ ವಿದ್ಯಾರ್ಥಿನಿಯಾಗಿದ್ದು . ನಿವೇದಿತ (14) ಎಂಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಓವರ್ ಸ್ಪೀಡ್ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿ ನಿಂತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯಲ್ಲಿದ್ದ ಮರ ಹಾಗೂ ಮನೆಯ ಗೋಡೆಗೆ ಗುದ್ದಿದೆ. ಈ ಘಟನೆಯಲ್ಲಿ ರಸ್ತೆ ಬದಿಯಿದ್ದ ಮನೆಯ ಮುಂಭಾಗದ ಛಾವಣಿಯೂ ಸಂಪೂರ್ಣ ಜಖಂ ಆಗಿದೆ.

ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅತಿ ವೇಗವಾಗಿ ಬಸ್ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಕೋಪಗೊಂಡ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್ಸಾನ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ



