ಮಂಗಳೂರು; ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಲು ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ. ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದೊಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ?
ಇನ್ನೂ ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡಾ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ. ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…