ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ; ಪ್ರಧಾನಿ ಮೋದಿ

ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ.

ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.

ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಹೀಗಾಗಿ ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!