ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ.
ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಹೀಗಾಗಿ ಇಂಡಿಯಾ- ಭಾರತ್ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…