ನಮ್ಮ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇವರು ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, 1947ರಲ್ಲಿ ಭಾರತದಿಂದ ಪ್ರತ್ಯೇಕಗೊಂಡವರು ಈಗ ತಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿರುವಂತೆ, ಇಂದಿನ ಯುವಪೀಳಿಗೆ ವಯಸ್ಕರಾಗುವ ಮೊದಲು ಅಖಂಡ ಭಾರತ ಅಥವಾ ಅವಿಭಜಿತ ಭಾರತದ ಕನಸು ನನಸಾಗಲಿದೆ. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮವರನ್ನೇ ನಾವು ಕತ್ತಲೆಯಲ್ಲಿ ಇರಿಸಿದ್ದೇವೆ. ನಾವು ಅವರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ. ಇದರ ಪರಿಣಾಮ ಇದು 2000 ವರ್ಷಗಳವರೆಗೂ ಮುಂದುವರೆದಿದ್ದು, ನಾವು ಅವರಿಗೆ ಸಮಾನತೆಯನ್ನು ನೀಡುವವರೆಗೆ, ಕೆಲವು ವಿಶೇಷ ಪರಿಹಾರಗಳನ್ನು ಒದಗಿಸಬೇಕಾಗುತ್ತದೆ. ಇದರಲ್ಲಿ ಮೀಸಲಾತಿಯೂ ಕೂಡಾ ಒಂದು. ನಮ್ಮ ಸಮಾಜದಲ್ಲಿ ತಾರತಮ್ಯ ಹೋಗಿಲ್ಲ. ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು. ನಾವು ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ. ಮೀಸಲಾತಿ ಎಂದರೆ ಗೌರವವನ್ನು ನೀಡುವುದಾಗಿದೆ. ಇದು ಆರ್ಥಿಕ ಅಥವಾ ರಾಜಕೀಯ ಸಮಾನತೆಯನ್ನು ಖಚಿತಪಡಿಸುವ ವಿಷಯವಲ್ಲ ಎಂದು ಭಾಗವತ್ ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…