ಮುಲ್ಕಿ: ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಧಾರ್ಮಿಕ ಸಭೆ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ದ್ವಾರದ ಬಳಿ ಬೃಹತ್ ವೇದಿಕೆಯಲ್ಲಿ ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ರು, ಬಳಿಕ, ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ, ದೇವರ ಸೇವೆಯ ಮನೋಭಾವದಿಂದ ಶಾಂತಿ ನೆಮ್ಮದಿ ಸಾಧ್ಯವಾಗಿದ್ದು ದಾರ್ಮಿಕ ಹಾಗೂ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಸ್ಥೆಯ ಪ್ರೋತ್ಸಾಹ ಅಭಿನಂದನೀಯ ಎಂದರು.
ಮುಖ್ಯ ಅತಿಥಿಗಳಾಗಿ ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಉದ್ಯಮಿ ರಾಮಮೂರ್ತಿ ರಾವ್, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ, ದ.ಕ.ಪದ್ಮಶಾಲಿ ಸಭಾದ ಪುರಂದರ ಶೆಟ್ಟಿಗಾರ್, ಉದ್ಯಮಿಗಳಾದ ರಘುರಾಮ ಪುನರೂರು, ಸುರೇಶ್ ರಾವ್ ಶ್ರೀನಿಧಿ, ಅಜಿತ್ ಕೆರೆಕಾಡು, ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ನಂದಿ ಫ್ರೆಂಡ್ಸ್ ನ ಅಧ್ಯಕ್ಷ ವಿಶ್ವನಾಥ ರಾವ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಗೋಪಿನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮವನ್ನು ನಿರೂಪಿಸಿದ್ದು, ಬಳಿಕ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…