ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನೂ ರಾಜ್ಯಪಾಲರು 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…