ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ನೂತನ ಸರದಿ ಸಂಕೀರ್ಣ, ಸೇವಾ ಕೌಂಟರ್ ಪೋಟೋ ಸೀರೆ ಕೌಂಟರ್ ಗಳು ಉದ್ಘಾಟನೆಗೊಂಡಿದೆ.

ದಿನದಿಂದ ದಿನಕ್ಕೆ ಕಟೀಲು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ದೇಗುಲ ನಿರಂತರವಾಗಿ ತೆರೆದಿದ್ದರೂ ಶುಕ್ರವಾರ ಭಾನುವಾರ ಅಲ್ಲದೆ ವಿಶೇಷ ದಿನಗಳಲ್ಲಿ ಸಹಸ್ರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.
ಈ ನಿಟ್ಟಿನಲ್ಲಿ ಹೊಸ ವಿನ್ಯಾಸದೊಂದಿಗೆ ಸೇವಾ ಕೌಂಟರ್ ಸಹಿತ, ಸೀರೆ ಪೋಟೋ ಕೌಂಟರ್ ವ್ಯವಸ್ಥಿತವಾದ ನಿರ್ಮಿಸಲಾಗಿದೆ. ಕಟೀಲು ದೇವರ ಪೋಟೋ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ದೇವರಿಗೆ ಸೀರೆ ಸಮರ್ಪಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನಲೆ ನೂತನ ಕೌಂಟರ್ ನಿರ್ಮಾಣವಾಗಿ, ಲೋಕಾರ್ಪಣೆಗೊಂಡಿದೆ.

ಇನ್ನೂ ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ. ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ , ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವೇದವ್ಯಾಸ ತಂತ್ರಿ, ಕೊಡೆತ್ತೂರು ವೇದವ್ಯಾಸ ಉಡುಪ, ಸತೀಶ್ ಶೆಟ್ಟಿ ಎಕ್ಕಾರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.



