ಪಂಜಿನಡ್ಕ ಫ್ರೆಂಡ್ಸ್ ಮತ್ತು ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಗಿದೆ.

ಬಳಿಕ ಅತಿಕಾರಿಬೆಟ್ಟು ಗ್ರಾಮ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸಂಘಟನೆಯ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕ್ರೀಡೆಗಳನ್ನು ನಡೆಸುವುದೇ ಅಲ್ಲದೆ, ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯ ಅಭಿನಂದನೀಯ ಎಂದರು.
ಇನ್ನೂ ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯೆ ಮಮತಾ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ ಹರೀಶ್ ಶೆಟ್ಟಿ ಶಶಿಕಲಾ , ಗೋಪಾಲ್ ಶಿಮಂತೂರು, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.




