ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಸುನಿತಾ ಆಯ್ಕೆ

ದಕ್ಷಿಣ ಕನ್ನಡ :ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ.


 ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದ  ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯ‌ರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.
ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ. ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರು ಮೇಯರ್ ಹುದ್ದೆಗೆ ಆಯ್ಕೆಯಾಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಮೇಯರ್ ಹುದ್ದೆ, ಮಂಗಳೂರು ಉತ್ತರಕ್ಕೆ ಉಪಮೇಯ‌ರ್ ಹುದ್ದೆ ಸಿಕ್ಕಿದೆ.


ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಕಾಂಗ್ರೆಸ್​ನಿಂದ ನವೀನ್ ಆರ್. ಡಿಸೋಜ ನಾಮಪತ್ರ ಸಲ್ಲಿಸಿದ್ಧರು. ಕಾಂಗ್ರೆಸ್​ನ ನವೀನ್ ಆರ್. ಡಿಸೋಜ ಪರವಾಗಿ 14 ಮತಗಳು, ವಿರುದ್ಧವಾಗಿ 47 ಮತಗಳು ಬಿದ್ದರೆ ಎಸ್‌ಡಿಪಿಐನ ಇಬ್ಬರು ತಟಸ್ಥರಾಗಿದ್ದರು. ಬಿಜೆಪಿಯ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು, ವಿರುದ್ಧವಾಗಿ 14 ಮತಗಳು ಬಿದ್ದಿದ್ದು ಇಬ್ಬರು ತಟಸ್ಥರಾಗಿದ್ಧರು. ಪಾಲಿಕೆಯಲ್ಲಿ ಬಿಜೆಪಿಯ ನಿಚ್ಚಳ ಬಹುಮತ ಇದ್ದು, ಕೊಡಿಯಾಲ್‌ಬೈಲ್ ವಾರ್ಡ್ ಸದಸ್ಯ ಸುಧೀರ್ ಶೆಟ್ಟಿ ಅವರು ಮೇಯರ್ ಹುದ್ದೆಗೆ ಬಹುಮತದಿಂದ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿರುವ ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಂಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಉಪಸ್ಥಿತರಿದ್ದು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದರು. ಇದೇ ವೇಳೆ ವಿವಿಧ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಯಿತು.
ಸುಧೀರ್ ಶೆಟ್ಟಿ ಈ ಹಿಂದೆ ಮುಖ್ಯ ಸಮಿತಿ ಸಚೇತಕರಾಗಿ, ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರೂ ಕೇಳಿಬಂದಿತ್ತು. ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್ ಅವರಿಗೆ ಅವಕಾಶ ಕಲ್ಪಿಸಿತ್ತು. 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

20 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

20 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

21 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

21 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

21 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago