ಮೂಡಬಿದಿರೆ: ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಹಂಡೇಲುಗುತ್ತು ಧನಕೀರ್ತಿ ಬಲಿಪ ಅವರು ಮೂಡುಬಿದಿರೆ ತುಳುಕೂಟ(ರಿ)ದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.
ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಕೂಟದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಡಾ.ಎಂ. ಮೋಹನ ಆಳ್ವ ಗೌರವಾಧ್ಯಕ್ಷರಾಗಿ, ಚಂದ್ರಹಾಸ ದೇವಾಡಿಗ ಕಾರ್ಯಾಧ್ಯಕ್ಷರಾಗಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಜಯಂತಿ ಎಸ್.ಬಂಗೇರ ಉಪಾಧ್ಯಕ್ಷರಾಗಿ, ಕೆ.ವೇಣುಗೋಪಾಲ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸದಾನಂದ ನಾರಾವಿ ಜೊತೆ ಕಾರ್ಯದರ್ಶಿಯಾಗಿ, ಸುಭಾಶ್ಚಂದ್ರ ಚೌಟ ಕೋಶಾಧಿಕಾರಿಯಾಗಿ ಪುನರಾಯ್ಕೆಯಾಗಿರುತ್ತಾರೆ.
ವಕೀಲರಾದ ಶ್ವೇತಾ ಜೈನ್ ಉಪಾಧ್ಯಕ್ಷರಾಗಿ ಮತ್ತು ಪ್ರತೀಕ್ ಸಾಲ್ಯಾನ್ ಹಾಗೂ ಪುಷ್ಪರಾಜ್ ಜೈನ್ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ಹೊಸದಾಗಿ ನೇಮಕ ಮಾಡಲಾಗಿದೆ. ಜಿನೇಂದ್ರ ಜೈನ್, ಜಯಪ್ರಕಾಶ್ ಪಡಿವಾಳ್, ವಿಶ್ವನಾಥ ಬೋವಿ, ಸುರೇಶ್ ಕೋಟ್ಯಾನ್, ಯತಿರಾಜ್ ಶೆಟ್ಟಿ, ಪದ್ಮನಾಭ ಮಿಜಾರು, ಗುರು ಎಂ.ಪಿ, ಪ್ರಸಾದ್ ಭಂಡಾರಿ, ಚೇತನಾ ಹೆಗ್ಡೆ, ಸುಮ ಸಿ.ದೇವಾಡಿಗ ಮತ್ತು ನಾರಾಯಣ ಕುಂದರ್ ಅವರನ್ನು ಕಾರ್ಯಕಾರಿ ಸಮಿತಿಯ ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…